-->
 ವಕೀಲರ ಮೇಲಿನ ಹಲ್ಲೆಗೆ ಖಂಡನೆ: ಉಡುಪಿಯಲ್ಲಿ ಕಲಾಪ ಬಹಿಷ್ಕರಿಸಿ ವಕೀಲರ ಪ್ರತಿಭಟನೆ

ವಕೀಲರ ಮೇಲಿನ ಹಲ್ಲೆಗೆ ಖಂಡನೆ: ಉಡುಪಿಯಲ್ಲಿ ಕಲಾಪ ಬಹಿಷ್ಕರಿಸಿ ವಕೀಲರ ಪ್ರತಿಭಟನೆ


ಬೆಂಗಳೂರಿನ ವೈಟ್‌ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಕೀಲರ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ ಹಾಗೂ ವಕೀಲರಿಗೆ ಸೂಕ್ತ ರಕ್ಷಣೆ ಒದಗಿಸುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ವಕೀಲರು ಸಾಂಕೇತಿಕ ಪ್ರತಿಭಟನೆ ನಡೆಸಿದರು.


ಕೋರ್ಟ್ ಕಲಾಪಗಳನ್ನು ಬಹಿಷ್ಕರಿಸಿದ ವಕೀಲರು, ವಕೀಲರ ಮೇಲಿನ ದೌರ್ಜನ್ಯವನ್ನು ತೀವ್ರವಾಗಿ ಖಂಡಿಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಮಟ್ಟಾರು ರತ್ನಾಕರ ಹೆಗ್ಡೆ, ಕಕ್ಷಿದಾರರಿಗೆ ಸೂಕ್ತ ನ್ಯಾಯ ದೊರಕಿಸಿಕೊಡಲು ಪ್ರಾಮಾಣಿಕವಾಗಿ ಶ್ರಮಿಸುವ ವಕೀಲರ ಮೇಲೆಯೇ ಹಲ್ಲೆ ಹಾಗೂ ದೌರ್ಜನ್ಯ ನಡೆಯುತ್ತಿರುವುದು ಖಂಡನೀಯ. ಸಮಾಜದಲ್ಲಿ ನ್ಯಾಯ ವ್ಯವಸ್ಥೆಯ ಪ್ರಮುಖ ಭಾಗವಾಗಿರುವ ವಕೀಲರಿಗೆ ಸೂಕ್ತ ರಕ್ಷಣೆ ಒದಗಿಸುವುದು ಸರ್ಕಾರದ ಕರ್ತವ್ಯವಾಗಿದೆ ಎಂದು ಒತ್ತಾಯಿಸಿದರು.

ವಕೀಲ ಅಖಿಲ್ ಹೆಗ್ಡೆ ಮಾತನಾಡಿ, ವಕೀಲರಿಗೆ ಸೂಕ್ತ ರಕ್ಷಣೆ ನೀಡುವ ವಿಚಾರದಲ್ಲಿ ಸರ್ಕಾರ ನಿರ್ಲಕ್ಷ್ಯ ವಹಿಸುತ್ತಿದೆ. ಈ ಪ್ರತಿಭಟನೆಯ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಸರ್ಕಾರದ ಗಮನ ಸೆಳೆಯಲಾಗುವುದು. ಸರ್ಕಾರದಿಂದ ಸೂಕ್ತ ಸ್ಪಂದನೆ ದೊರೆಯದಿದ್ದಲ್ಲಿ ಮುಂದಿನ ದಿನಗಳಲ್ಲಿ ತೀವ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಉಡುಪಿ ವಕೀಲರ ಸಂಘದ ಸರ್ವ ಸದಸ್ಯರು ಭಾಗವಹಿಸಿದ್ದರು.

Ads on article

Advertise in articles 1

advertising articles 2

Advertise under the article