ಸೈಕಲ್‌ನಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಸವಾರ ಸಾವು
Monday, November 09, 2026
ಸೈಕಲ್‌ನಿಂದ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದು ತಲೆಗೆ ಗಂಭೀರ ಗಾಯಗೊಂಡಿದ್ದ ಸವಾರ ಮೃತಪಟ್ಟ ಘಟನೆ ಶನಿವಾರ ಪಡುಬಿದ್ರೆಯ ಪಣಿಯೂರು ಪೇಟೆಯಲ್ಲಿ ನಡೆದಿದೆ.
ಬೆಳಪು ದರ್ಖಾಸು ನಿವಾಸಿ ವಿಶ್ವನಾಥ (47) ಮೃತಪಟ್ಟವರು. ಅವರು ಸೈಕಲ್‌ನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಪಣಿಯೂರು ಪೇಟೆಯ ಬಳಿ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದಿದ್ದರು. ಪರಿಣಾಮ ತಲೆಗೆ ತೀವ್ರ ಗಾಯವಾಗಿತ್ತು.
ತಕ್ಷಣ ಸ್ಥಳಕ್ಕೆ ಧಾವಿಸಿದ ಉಚ್ಚಿಲದ ಸಮಾಜಸೇವಕರಾದ ಜಲಾಲುದ್ದೀನ್ ಮತ್ತು ಹಮೀದ್ ಅವರು ಸ್ಥಳೀಯರ ನೆರವಿನಿಂದ ಗಾಯಾಳುವನ್ನು ಆಸ್ಪತ್ರೆಗೆ ಕರೆದೊಯ್ಯಲು ಮುಂದಾದರು. ಆದರೆ, ಮಾರ್ಗಮಧ್ಯೆಯೇ ವಿಶ್ವನಾಥ ಅವರು ಕೊನೆಯುಸಿರೆಳೆದಿದ್ದಾರೆ.
ಘಟನಾ ಸ್ಥಳಕ್ಕೆ ಪಡುಬಿದ್ರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.