-->
 ತಾಯಿ ಅಂತಿಮ ದರ್ಶನಕ್ಕೆ ಆಗಮಿಸಿದ ಡಾನ್ ರವಿ ಪೂಜಾರಿ: ಉಡುಪಿಯಲ್ಲಿ ಬಿಗಿ ಭದ್ರತೆ

ತಾಯಿ ಅಂತಿಮ ದರ್ಶನಕ್ಕೆ ಆಗಮಿಸಿದ ಡಾನ್ ರವಿ ಪೂಜಾರಿ: ಉಡುಪಿಯಲ್ಲಿ ಬಿಗಿ ಭದ್ರತೆ


ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ನ್ಯಾಯಾಲಯದ ಅನುಮತಿ ಪಡೆದಿರುವ ಭೂಗತ ಪಾತಕಿ ರವಿ ಪೂಜಾರಿಯನ್ನು ಶನಿವಾರ ಬೆಳಗ್ಗೆ ಬಿಗಿ ಪೊಲೀಸ್ ಭದ್ರತೆಯಲ್ಲಿ ಉಡುಪಿಯ ಮಲ್ಪೆಗೆ ಕರೆತರಲಾಯಿತು.

ರವಿ ಪೂಜಾರಿ ಅವರ ತಾಯಿ ಸುಶೀಲಾ ಪೂಜಾರಿ ಅವರು ನ. 12ರಂದು ನಿಧನರಾಗಿದ್ದು, ಅವರ ಅಂತ್ಯಕ್ರಿಯೆ ಇಂದು ಬೆಳಗ್ಗೆ 11 ಗಂಟೆಗೆ ಉಡುಪಿಯ ನೆರ್ಗಿಯಲ್ಲಿರುವ ಸ್ವಗೃಹದಲ್ಲಿ ನಡೆಯಲಿದೆ.

ತಾಯಿಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಅನುಮತಿ ಕೋರಿ ರವಿ ಪೂಜಾರಿ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದರು. ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯವು ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಅನುಮತಿ ನೀಡಿ ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಅಗತ್ಯ ಪೊಲೀಸ್ ಎಸ್ಕಾರ್ಟ್ ಹಾಗೂ ಬಿಗಿ ಭದ್ರತೆಯೊಂದಿಗೆ ರವಿ ಪೂಜಾರಿಯನ್ನು ಉಡುಪಿಗೆ ಕರೆತರಲಾಗಿದೆ.

ಅಂತ್ಯಕ್ರಿಯೆ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಪೊಲೀಸ್ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿದೆ.

Ads on article

Advertise in articles 1

advertising articles 2

Advertise under the article