-->
ಆಶಾ ಕಾರ್ಯಕರ್ತರ ಪ್ರತಿಭಟನೆ: ಗೊಂದಲ ಮುಂದುವರಿಕೆ

ಆಶಾ ಕಾರ್ಯಕರ್ತರ ಪ್ರತಿಭಟನೆ: ಗೊಂದಲ ಮುಂದುವರಿಕೆ


ರಾಜ್ಯದಲ್ಲಿ ಆಶಾ ಕಾರ್ಯಕರ್ತೆಯರ ಅನಿರ್ದಿಷ್ಟಾವಧಿ ಪ್ರತಿಭಟನೆ ಮುಂದುವರಿಯುವ ಕುರಿತು ಗೊಂದಲದ ಪರಿಸ್ಥಿತಿ ನಿರ್ಮಾಣವಾಗಿದೆ. 

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನವೆಂಬರ್ 17ರಿಂದ ಆರಂಭಗೊಂಡಿದ್ದ 12 ದಿನಗಳ ಪ್ರತಿಭಟನೆಗೆ ಶನಿವಾರ, ನವೆಂಬರ್ 28ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಾಸಿಕ ಗೌರವಧನದಲ್ಲಿ ₹2,000 ಹೆಚ್ಚಳ ಘೋಷಿಸಿದ ಬಳಿಕ ಪ್ರತಿಭಟನೆ ಹಿಂಪಡೆಯುವ ಸೂಚನೆ ದೊರೆತಿತ್ತು. ಈ ಹೆಚ್ಚಳವು 2027ರ ಜನವರಿ 1ರಿಂದ ಜಾರಿಗೆ ಬರಲಿದೆ ಎಂದು ಘೋಷಿಸಲಾಗಿತ್ತು.

ಬಳಿಕ ಪ್ರತಿಭಟನಾ ಸ್ಥಳಕ್ಕೆ ಮರಳಿದ ಸಂಘಟನೆಗಳ ಮುಖಂಡರನ್ನು ರೂ. 2000 ಹೆಚ್ಚಳಕ್ಕೆ ಒಪ್ಪಿಗೆ ಸೂಚಿಸಿದ್ದಕ್ಕೆ ಕಾರ್ಯಕರ್ತೆಯರು ತೀವ್ರವಾಗಿ ತರಾಟೆಗೆ ತೆಗೆದುಕೊಂಡರೆಂದು ತಿಳಿದು ಬಂದಿದೆ. 

ಮುಖ್ಯಮಂತ್ರಿಯವರ ಘೋಷಣೆಯ ಬಳಿಕ ಆಶಾ ಕಾರ್ಯಕರ್ತೆಯರ ನಿಯೋಗ ಪ್ರತಿಭಟನೆ ಅಂತ್ಯಗೊಳಿಸುವ ನಿರ್ಧಾರ ಪ್ರಕಟಿಸಿದರೂ, ಬಳಿಕ ಸಂಘಟನೆಯ ಮುಖಂಡರು ಅನಿರ್ದಿಷ್ಟಾವಧಿ ಹೋರಾಟ ಮುಂದುವರಿಯಲಿದೆ ಎಂದು ಸ್ಪಷ್ಟಪಡಿಸಿದ್ದು, ಪ್ರತಿಭಟನೆಯ ಸ್ಥಿತಿಗತಿ ಕುರಿತು ಅನಿಶ್ಚಿತತೆ ಮುಂದುವರಿದಿದೆ.

Ads on article

Advertise in articles 1

advertising articles 2

Advertise under the article