-->
 ಗಾಳಿ ಮಳೆಗೆ ಮನೆ ಮೇಲೆ ಬಿದ್ದ ಬೃಹತ್ ಮರ: ಆರು ಮಂದಿಗೆ ಗಾಯ

ಗಾಳಿ ಮಳೆಗೆ ಮನೆ ಮೇಲೆ ಬಿದ್ದ ಬೃಹತ್ ಮರ: ಆರು ಮಂದಿಗೆ ಗಾಯ


ಸುಳ್ಯ ತಾಲೂಕಿನಲ್ಲಿ ಗುರುವಾರ ರಾತ್ರಿ ಸುರಿದ ಭಾರೀ ಗಾಳಿ ಮಳೆಗೆ ಬೃಹತ್ ಮರವೊಂದು ಮನೆಯ ಮೇಲೆ ಉರುಳಿ ಬಿದ್ದ ಪರಿಣಾಮ ಒಂದೇ ಕುಟುಂಬದ ಆರು ಮಂದಿ ಗಾಯಗೊಂಡ ಘಟನೆ ಆಲೆಟ್ಟಿ ಗ್ರಾಮದ ಚಳ್ಳಂಗಾರು ಪ್ರದೇಶದಲ್ಲಿ ನಡೆದಿದೆ.

ಚಳ್ಳಂಗಾರು ನಿವಾಸಿ ದೇವಿದಾಸ ಅವರ ಮನೆಗೆ ಗುರುವಾರ ರಾತ್ರಿ ಸುಮಾರು 9.30ರ ವೇಳೆಗೆ ಬೃಹತ್ ಗಾತ್ರದ ಮರವೊಂದು ಉರುಳಿ ಬಿದ್ದಿದೆ. ಈ ಸಂದರ್ಭದಲ್ಲಿ ಮನೆಯೊಳಗಿದ್ದ ದೇವಿದಾಸ, ಅವರ ಪತ್ನಿ ಪೂರ್ಣಿಮಾ, ತಾಯಿ ಕುಸುಮಾವತಿ, ತಂಗಿ ಅನಿತಾ, ಪುತ್ರಿ ಸುಶ್ಮಿತಾ ಹಾಗೂ ಒಂದು ವರ್ಷದ ಗಂಡು ಮಗು ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ತಕ್ಷಣ ಸುಳ್ಯದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ದೇವಿದಾಸ ಅವರ ಪುತ್ರಿ ಸುಶ್ಮಿತಾ ಅವರ ಭುಜ ಹಾಗೂ ಎದೆಯ ಭಾಗಕ್ಕೆ ಗಂಭೀರ ಗಾಯಗಳಾಗಿದ್ದು, ವೈದ್ಯರ ಸಲಹೆಯಂತೆ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಕಂದಾಯ ಇಲಾಖೆ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Ads on article

Advertise in articles 1

advertising articles 2

Advertise under the article