ಉಡುಪಿ ಜಿಲ್ಲೆಯ ಹಲವೆಡೆ ದಿಢೀರ್ ಗುಡುಗು ಸಹಿತ ಮಳೆ
Sunday, November 01, 2026
ಉಡುಪಿ ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಭಾನುವಾರ ಸಂಜೆ ದಿಢೀರ್ ಮಳೆಯಾಗಿದೆ. ಸಂಜೆ ವೇಳೆಗೆ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಕೆಲವೆಡೆ ಲಘು ಗುಡುಗು ಸಹಿತ ಮಳೆ ಸುರಿದಿದೆ.
ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕರಾವಳಿ ಜಿಲ್ಲೆಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಮುಂದಿನ 2ರಿಂದ 3 ದಿನಗಳ ಕಾಲ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಭಾನುವಾರ ಸಂಜೆ ಏಕಾಏಕಿ ಸುರಿದ ಮಳೆಯಿಂದಾಗಿ ಹೊರಗಡೆ ತೆರಳಿದ್ದವರು ತೊಂದರೆ ಅನುಭವಿಸಿದರು. ಮಳೆಯ ನಿರೀಕ್ಷೆಯಿಲ್ಲದೆ ಕೊಡೆ ಹಾಗೂ ರೈನ್‌ಕೋಟ್ ಇಲ್ಲದೆ ಬಂದಿದ್ದವರು ಆಶ್ರಯಕ್ಕಾಗಿ ಪರದಾಡುವಂತಾಯಿತು. ದಿಢೀರ್ ಮಳೆಯಿಂದಾಗಿ ಸಂಜೆ ವೇಳೆಯ ಜನಜೀವನವೂ ಕೆಲಕಾಲ ಅಸ್ತವ್ಯಸ್ತಗೊಂಡಿತು.
