-->
 ಮಣಿಪಾಲ ಕಾಲೇಜಿನ ಹಾಸ್ಟೆಲ್‌ನಲ್ಲಿ ಬಿಟೆಕ್ ವಿದ್ಯಾರ್ಥಿನಿ ಆತ್ಮಹತ್ಯೆ

ಮಣಿಪಾಲ ಕಾಲೇಜಿನ ಹಾಸ್ಟೆಲ್‌ನಲ್ಲಿ ಬಿಟೆಕ್ ವಿದ್ಯಾರ್ಥಿನಿ ಆತ್ಮಹತ್ಯೆ


ಮಣಿಪಾಲದ ಕಾಲೇಜಿನ ಮಹಿಳಾ ಹಾಸ್ಟೆಲ್‌ನಲ್ಲಿ ಬಿಟೆಕ್ ಮೂರನೇ ವರ್ಷದ ವಿದ್ಯಾರ್ಥಿನಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನ.11ರಂದು ಬೆಳಕಿಗೆ ಬಂದಿದೆ.

ಮೃತ ವಿದ್ಯಾರ್ಥಿನಿಯನ್ನು ಶ್ರೀಯಾ ಪರ್ಗಿ (21) ಎಂದು ಗುರುತಿಸಲಾಗಿದೆ.

ಉಡುಪಿ ತಾಲೂಕು ಹೆರ್ಗಾ ಗ್ರಾಮದ ಮಣಿಪಾಲ ಕಾಲೇಜಿನ ಹಾಸ್ಟೆಲ್ ನಲ್ಲಿ ಶ್ರೀಯಾ ಪರ್ಗಿ ಅವರು ಮತ್ತೋರ್ವ ವಿದ್ಯಾರ್ಥಿನಿಯೊಂದಿಗೆ ವಾಸವಾಗಿದ್ದರು. ಮತ್ತೊರ್ವ ವಿದ್ಯಾರ್ಥಿನಿ ರಜೆಯಲ್ಲಿದ್ದ ವೇಳೆ ನ.10ರಂದು ರಾತ್ರಿ 9.39ಕ್ಕೆ ಬಯೋಮೆಟ್ರಿಕ್ ಹಾಜರಾತಿ ದಾಖಲಿಸಿ ತಮ್ಮ ಕೊಠಡಿಗೆ ತೆರಳಿದ್ದ ಶ್ರೀಯಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ads on article

Advertise in articles 1

advertising articles 2

Advertise under the article