-->
ಉಡುಪಿ ಹಳೆ ಕಾರಾಗೃಹದಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಉಡುಪಿ ಹಳೆ ಕಾರಾಗೃಹದಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ


ಉಡುಪಿ ನಗರದ ಹಳೆ ತಾಲೂಕು ಕಚೇರಿ ಸಮೀಪದಲ್ಲಿರುವ ಹಳೆ ಕಾರಾಗೃಹದಲ್ಲಿ ಅಪರಿಚಿತ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಮಂಗಳವಾರ ಪತ್ತೆಯಾಗಿದೆ.

ಮೃತ ವ್ಯಕ್ತಿ ಸುಮಾರು ಹತ್ತು ದಿನಗಳ ಹಿಂದೆಯೇ ಮೃತಪಟ್ಟಿರಬಹುದು ಎಂದು ಅಂದಾಜಿಸಲಾಗಿದೆ. ಯಾವುದೋ ಕಾಯಿಲೆಯಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಮೃತ ವ್ಯಕ್ತಿಯ ಹೆಸರು ಹಾಗೂ ವಿಳಾಸದ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ಮೃತರ ವಾರಸುದಾರರು ಅಥವಾ ಪರಿಚಯಸ್ಥರು ಇದ್ದಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ

Ads on article

Advertise in articles 1

advertising articles 2

Advertise under the article