ಕಾಪು ಬೀಚ್‌ನಲ್ಲಿ ಸಮುದ್ರ ಪಾಲಾಗಿದ್ದ ಯುವಕನ ಮೃತದೇಹ ಪತ್ತೆ; ಮತ್ತೊಬ್ಬನಿಗಾಗಿ ಶೋಧ
Monday, November 23, 2026
ಕಾಪು ಬೀಚ್‌ನಲ್ಲಿ ಭಾನುವಾರ ಸಮುದ್ರ ಪಾಲಾಗಿದ್ದ ಇಬ್ಬರು ಯುವಕರ ಪೈಕಿ ಓರ್ವನ ಮೃತದೇಹ ಸೋಮವಾರ ಬೆಳಗ್ಗೆ ಪತ್ತೆಯಾಗಿದೆ.
ಮೃತರನ್ನು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮಾವಿನಕೊಪ್ಪ ನಿವಾಸಿ ಅಲ್ತಾಫ್ ಅವರ ಪುತ್ರ ಸಮೀರ್ (20) ಎಂದು ಗುರುತಿಸಲಾಗಿದೆ.
ಇದೇ ವೇಳೆ ನಾಪತ್ತೆಯಾಗಿರುವ ದಾವಣಗೆರೆಯ ಅಹಮ್ಮದಿ ನಗರದ ನಿವಾಸಿ ಝಿಯಾವುಲ್ಲಾ ಅವರ ಪುತ್ರ ಮಲ್ಲಿಕ್ ರಿಹಾನ್ (15) ಗಾಗಿ ಶೋಧ ಕಾರ್ಯ ಮುಂದುವರಿದಿದೆ.
ದಾವಣಗೆರೆಯಿಂದ 12 ಮಂದಿ ಪ್ರವಾಸಕ್ಕೆಂದು ಕಾಪು ಬೀಚ್‌ಗೆ ಆಗಮಿಸಿದ್ದರು. ಈ ಪೈಕಿ ಐವರು ಯುವಕರು ಸಮುದ್ರಕ್ಕೆ ಇಳಿದು ಈಜುತ್ತಿದ್ದಾಗ ಮೂವರು ಸಮುದ್ರದ ಬೃಹತ್ ಅಲೆಗಳ ಹೊಡೆತಕ್ಕೆ ಸಿಲುಕಿ ಕೊಚ್ಚಿಕೊಂಡು ಹೋಗಿದ್ದರು. ತಕ್ಷಣ ಕಾರ್ಯಪ್ರವೃತ್ತರಾದ ಜೀವ ರಕ್ಷಕ ದಳದ ಸಿಬ್ಬಂದಿ ಮೂವರ ಪೈಕಿ ಓರ್ವನನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದರು. ಉಳಿದ ಇಬ್ಬರು ಸಮುದ್ರದಲ್ಲಿ ನಾಪತ್ತೆಯಾಗಿದ್ದರು.
ಸೋಮವಾರ ಬೆಳಗ್ಗೆ ಸಮೀರ್ ಅವರ ಮೃತದೇಹ ಪತ್ತೆಯಾಗಿದ್ದು, ಮತ್ತೊಬ್ಬ ಯುವಕನಿಗಾಗಿ ಶೋಧ ಕಾರ್ಯ ಮುಂದುವರಿದಿದೆ.