-->
ಬಿಜೆಪಿ ಯುವಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಹೇಮಂಗ್ ಜೋಶಿ ಭೇಟಿಯಾದ ಉಡುಪಿ ಜಿಲ್ಲಾ ಬಿಜೆಪಿ ಯುವಮೋರ್ಚಾ ತಂಡ

ಬಿಜೆಪಿ ಯುವಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಹೇಮಂಗ್ ಜೋಶಿ ಭೇಟಿಯಾದ ಉಡುಪಿ ಜಿಲ್ಲಾ ಬಿಜೆಪಿ ಯುವಮೋರ್ಚಾ ತಂಡ

 


ಬಿಜೆಪಿ ಯುವಮೋರ್ಚಾದ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಯಾದ ಡಾ. ಹೇಮಂಗ್ ಜೋಶಿ ಅವರನ್ನು ಉಡುಪಿ ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಅವರ ನೇತೃತ್ವದಲ್ಲಿ ಜಿಲ್ಲಾ ಯುವಮೋರ್ಚಾ ತಂಡವು ನವದೆಹಲಿಯಲ್ಲಿ ಭೇಟಿಯಾಗಿ ಅಭಿನಂದಿಸಿ, ಶುಭಹಾರೈಸಿತು.

ಈ ಸಂದರ್ಭದಲ್ಲಿ ರಾಷ್ಟ್ರೀಯ ಯುವಮೋರ್ಚಾ ಕಾರ್ಯಕಾರಿಣಿ ಸದಸ್ಯೆ ರಶ್ಮಿ ಸಾಮಂತ್ ಉಪಸ್ಥಿತರಿದ್ದರು. ಜಿಲ್ಲಾ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಅಭಿರಾಜ್ ಸುವರ್ಣ, ಜಿಲ್ಲಾ ಯುವಮೋರ್ಚಾ ಉಪಾಧ್ಯಕ್ಷ ಗುರುರಾಜ್ ಮಾಡ ಹಾಗೂ ಪೃಥ್ವಿರಾಜ್ ಮಣಿಪಾಲ್ ಅವರು ತಂಡದೊಂದಿಗೆ ಉಪಸ್ಥಿತರಿದ್ದರು.

Ads on article

Advertise in articles 1

advertising articles 2

Advertise under the article