-->
ಮಾಬುಕಳ ಸೇತುವೆಯಿಂದ ಸೀತಾ ನದಿಗೆ ಹಾರಿ ದಂಪತಿ ಆತ್ಮಹತ್ಯೆ

ಮಾಬುಕಳ ಸೇತುವೆಯಿಂದ ಸೀತಾ ನದಿಗೆ ಹಾರಿ ದಂಪತಿ ಆತ್ಮಹತ್ಯೆ


ಉಡುಪಿ ಜಿಲ್ಲೆಯ ಕೋಟ ಸಮೀಪದ ರಾಷ್ಟ್ರೀಯ ಹೆದ್ದಾರಿ 66ರ ಮಾಬುಕಳ ಸೇತುವೆಯಿಂದ ಸೀತಾ ನದಿಗೆ ಹಾರಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. 

ಮೃತರನ್ನು ಮೂಲತಃ ತುಮಕೂರು ಜಿಲ್ಲೆಯವರಾದ ಶ್ರೀನಿವಾಸ್ ಮೂರ್ತಿ ಎಚ್. (52) ಮತ್ತು ಅವರ ಪತ್ನಿ ಗಂಗಾ (48) ಎಂದು ಗುರುತಿಸಲಾಗಿದೆ.

ದಂಪತಿ ಶನಿವಾರ (ನ.14) ರಾತ್ರಿ ಸುಮಾರು 10 ಗಂಟೆಯ ವೇಳೆಗೆ ಚೂಡಿದಾರದ ಶಾಲಿನಿಂದ ಪರಸ್ಪರ ಕೈಗಳನ್ನು ಕಟ್ಟಿಕೊಂಡು ಮಾಬುಕಳ ಸೇತುವೆಯಿಂದ ಸೀತಾ ನದಿಗೆ ಹಾರಿದ್ದಾರೆ ಎನ್ನಲಾಗಿದೆ.

ದಂಪತಿ ಸುಮಾರು ಒಂದು ವಾರದ ಹಿಂದೆ ಕರಾವಳಿ ಹಾಗೂ ಮಲೆನಾಡು ಭಾಗದ ವಿವಿಧ ತೀರ್ಥಕ್ಷೇತ್ರಗಳ ದರ್ಶನಕ್ಕಾಗಿ ಆಗಮಿಸಿದ್ದರು. ಶನಿವಾರ ಮುರುಡೇಶ್ವರಕ್ಕೆ ಭೇಟಿ ನೀಡಿದ ಬಳಿಕ ಮಾಬುಕಳ ಪ್ರದೇಶಕ್ಕೆ ಬಂದಿದ್ದರು ಎಂದು ತಿಳಿದುಬಂದಿದೆ.

ದಂಪತಿ ನದಿಗೆ ಹಾರುವುದನ್ನು ಗಮನಿಸಿದ ಆಟೋ ಚಾಲಕರೊಬ್ಬರು ತಕ್ಷಣ ಸ್ಥಳೀಯರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ರಾತ್ರಿ ವೇಳೆ ಶೋಧ ಕಾರ್ಯಾಚರಣೆ ನಡೆಸಿದರೂ ಮೃತದೇಹಗಳು ಪತ್ತೆಯಾಗಿರಲಿಲ್ಲ.

ಭಾನುವಾರ (ನ.15) ಬೆಳಗ್ಗೆ ಮಾಬುಕಳ ಸೇತುವೆಯಿಂದ ಸುಮಾರು 500 ಮೀಟರ್ ದೂರದ ಪಾಂಡೇಶ್ವರದ ಸೀತಾ ನದಿಯಲ್ಲಿ ದಂಪತಿಯ ಮೃತದೇಹಗಳು ಪತ್ತೆಯಾಗಿವೆ. ಇಬ್ಬರ ಕೈಗಳು ಪರಸ್ಪರ ಕಟ್ಟಿಕೊಂಡ ಸ್ಥಿತಿಯಲ್ಲಿದ್ದವು ಎಂದು ತಿಳಿದುಬಂದಿದೆ.

ದಂಪತಿ ಆತ್ಮಹತ್ಯೆ ಮಾಡಿಕೊಳ್ಳಲು ನಿಖರ ಕಾರಣವೇನೆಂಬುದು ಇನ್ನೂ ತಿಳಿದುಬಂದಿಲ್ಲ. ಈ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Ads on article

Advertise in articles 1

advertising articles 2

Advertise under the article