-->
 ಕದಳೀ ಪ್ರಿಯ ಪೆರ್ಡೂರು ಶ್ರೀ ಅನಂತಪದ್ಮನಾಭ ದೇವರಿಗೆ ಬಾಳೆ ಮೇಳದ ಪ್ರಥಮ ಆಮಂತ್ರಣ ಸಮರ್ಪಣೆ

ಕದಳೀ ಪ್ರಿಯ ಪೆರ್ಡೂರು ಶ್ರೀ ಅನಂತಪದ್ಮನಾಭ ದೇವರಿಗೆ ಬಾಳೆ ಮೇಳದ ಪ್ರಥಮ ಆಮಂತ್ರಣ ಸಮರ್ಪಣೆ


ಸೋದೆ ಶ್ರೀ ವಾದಿರಾಜ ಮಠದ ವತಿಯಿಂದ ಆಯೋಜಿಸಲಾಗುತ್ತಿರುವ ರಾಷ್ಟ್ರಮಟ್ಟದ ಬಾಳೆ ಮೇಳ ಕದಳೀ ವಿಶ್ವದರ್ಶನದ ಆಮಂತ್ರಣ ಪತ್ರಿಕೆಗಳ ವಿತರಣಾ ಕಾರ್ಯಕ್ಕೆ ಇಂದಿನಿಂದ ಅಧಿಕೃತವಾಗಿ ಚಾಲನೆ ನೀಡಲಾಯಿತು.


ಈ ಸಂದರ್ಭದಲ್ಲಿ ಮೊದಲ ಆಮಂತ್ರಣ ಪತ್ರಿಕೆಯನ್ನು ಕದಳೀ ಪ್ರಿಯ ಪೆರ್ಡೂರು ಶ್ರೀ ಅನಂತಪದ್ಮನಾಭ ದೇವರಿಗೆ ಭಕ್ತಿಪೂರ್ವಕವಾಗಿ ಸಮರ್ಪಿಸಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಅರ್ಚಕರು ಶ್ರೀ ದೇವರಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ, ಶ್ರೀಪಾದರ ಸಂಕಲ್ಪದಂತೆ ಕದಳೀ ವಿಶ್ವದರ್ಶನ ಕಾರ್ಯಕ್ರಮವು ನಿರ್ವಿಘ್ನವಾಗಿ ಹಾಗೂ ಯಶಸ್ವಿಯಾಗಿ ನೆರವೇರಲೆಂದು ಹಾರೈಸಿದರು.

ನಂತರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ಸಂತೋಷ್ ಕುಲಾಲ್ ಅವರಿಗೆ ಆಮಂತ್ರಣ ಪತ್ರಿಕೆಯನ್ನು ನೀಡಿ ಕಾರ್ಯಕ್ರಮಕ್ಕೆ ಆತ್ಮೀಯವಾಗಿ ಆಹ್ವಾನಿಸಲಾಯಿತು.

Ads on article

Advertise in articles 1

advertising articles 2

Advertise under the article