-->
 ಪ್ರದೀಪ್ ಪೂಜಾರಿ ಪ್ರಕರಣ: ಕರ್ತವ್ಯ ಲೋಪ ಎಸಗಿದ ಪೊಲೀಸ್ ಸಿಬ್ಬಂದಿಗಳ ಅಮಾನತು, ಪಿಎಸ್‌ಐ ವರ್ಗಾವಣೆ

ಪ್ರದೀಪ್ ಪೂಜಾರಿ ಪ್ರಕರಣ: ಕರ್ತವ್ಯ ಲೋಪ ಎಸಗಿದ ಪೊಲೀಸ್ ಸಿಬ್ಬಂದಿಗಳ ಅಮಾನತು, ಪಿಎಸ್‌ಐ ವರ್ಗಾವಣೆ


ಪೆರ್ಡೂರಿನ ಪ್ರದೀಪ್ ಪೂಜಾರಿ ಪ್ರಕರಣದಾ ನಿರ್ವಹಣೆಯಲ್ಲಿ ಕರ್ತವ್ಯ ಲೋಪ ಎಸಗಿದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ವಿರುದ್ಧ ಪೊಲೀಸ್ ಇಲಾಖೆ ಕ್ರಮ ಕೈಗೊಂಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ನಡೆಸಿದ ವಿಚಾರಣೆಯ ವರದಿಯನ್ನು ಪಶ್ಚಿಮ ವಲಯದ ಡಿಐಜಿಗೆ ಸಲ್ಲಿಸಲಾಗಿದೆ. ಈ ವರದಿಯ ಆಧಾರದ ಮೇಲೆ ಹಿರಿಯಡ್ಕ ಪೊಲೀಸ್ ಠಾಣೆಯ ಪಿಎಸ್‌ಐ ಅವರನ್ನು ಪಶ್ಚಿಮ ವಲಯದ ಡಿಐಜಿ ಕಚೇರಿಗೆ ವರ್ಗಾಯಿಸಿ, ಅವರ ವಿರುದ್ಧ ಇಲಾಖಾ ಶಿಸ್ತು ಕ್ರಮ ಆರಂಭಿಸಲಾಗಿದೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಪತ್ರೆಯಲ್ಲಿ ಭದ್ರತಾ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಠಾಣೆಯ ಇಬ್ಬರು ಪೊಲೀಸ್ ಸಿಬ್ಬಂದಿ ಕರ್ತವ್ಯದ ವೇಳೆ ನಿರ್ಲಕ್ಷ್ಯ ವಹಿಸಿರುವುದು ಮಹಿಳಾ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರು ಸಲ್ಲಿಸಿದ ವರದಿಯಲ್ಲಿ ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಇಬ್ಬರು ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಅವರ ವಿರುದ್ಧವೂ ಮುಂದಿನ ಇಲಾಖಾ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಪೊಲೀಸ್ ಇಲಾಖೆ ತಿಳಿಸಿದೆ.


 

Ads on article

Advertise in articles 1

advertising articles 2

Advertise under the article