-->
 ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಉಸ್ತುವಾರಿ ಸಚಿವರಿಗೆ ಮನವಿ

ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಉಸ್ತುವಾರಿ ಸಚಿವರಿಗೆ ಮನವಿ


ಪೆರ್ಡೂರಿನ ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಬಿಲ್ಲವ ಯುವ ವೇದಿಕೆ ಅಧ್ಯಕ್ಷ ಪ್ರವೀಣ್ ಪೂಜಾರಿ ನೇತೃತ್ವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್ ಅವರಿಗೆ ಮನವಿ ಸಲ್ಲಿಸಲಾಯಿತು.


ಪ್ರದೀಪ್ ಪೂಜಾರಿ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿದ ಯುವತಿಯ ಕುಟುಂಬಸ್ಥರ ಕಿರುಕುಳದಿಂದ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದು, ಪ್ರಕರಣದ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು.

ಅಲ್ಲದೆ, ಪ್ರದೀಪ್ ಪೂಜಾರಿ ಮೇಲೆ ಗಂಭೀರ ಹಲ್ಲೆ ನಡೆದಿದ್ದರೂ, ಈ ಕುರಿತು ಸಂತ್ರಸ್ತರು ನೀಡಲು ಮುಂದಾದ ದೂರನ್ನು ಹಿರಿಯಡ್ಕ ಪೊಲೀಸ್ ಠಾಣೆಯ ಪಿಎಸ್‌ಐ ಸ್ವೀಕರಿಸಿಲ್ಲ ಎಂದು ಆರೋಪಿಸಲಾಯಿತು. ಕರ್ತವ್ಯ ಲೋಪ ಎಸಗಿದ ಪೊಲೀಸ್ ಅಧಿಕಾರಿಯ ವಿರುದ್ಧವೂ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮನವಿಯಲ್ಲಿ ಆಗ್ರಹಿಸಲಾಯಿತು.

ಮನವಿ ಸ್ವೀಕರಿಸಿದ ಸಚಿವ ರಿಜ್ವಾನ್ ಅರ್ಷದ್ ಅವರು ಈ ಬಗ್ಗೆ ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಗೀತಾಂಜಲಿ ಸುವರ್ಣ, ಪ್ರದೀಪ್ ಪೂಜಾರಿ ಅವರ ಸಹೋದರ ದಿಲೀಪ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Ads on article

Advertise in articles 1

advertising articles 2

Advertise under the article