-->
 ಬೈಂದೂರು: ಹಾಡುಹಗಲೇ ಮನೆ ಬಾಗಿಲು ಒಡೆದು ಕಳ್ಳತನ

ಬೈಂದೂರು: ಹಾಡುಹಗಲೇ ಮನೆ ಬಾಗಿಲು ಒಡೆದು ಕಳ್ಳತನ


ಹಾಡುಹಗಲೇ ಮನೆಯ ಬಾಗಿಲು ಒಡೆದು ಒಳನುಗ್ಗಿದ ಕಳ್ಳರು ನಗದು ಹಾಗೂ ಚಿನ್ನಾಭರಣ ಕಳವುಗೈದ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಸಮೀಪದ ಮುದ್ರಮಕ್ಕಿಯಲ್ಲಿ ನಡೆದಿದೆ.

ಮುದ್ರಮಕ್ಕಿಯಲ್ಲಿ ಶಿವರಾಮ ಪೂಜಾರಿ ಹಾಗೂ ಅರುಣ್ ಮೊಗೇರ್ ಎಂಬವರು ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ಗುರುವಾರ ಮನೆಯಲ್ಲಿ ಯಾರೂ ಇಲ್ಲದ ಸಮಯವನ್ನು ಗಮನಿಸಿದ ಕಳ್ಳರು ಮನೆಯ ಬಾಗಿಲು ಒಡೆದು ಒಳನುಗ್ಗಿದ್ದಾರೆ. ಬಳಿಕ ಮನೆಯಲ್ಲಿದ್ದ ಸುಮಾರು ಒಂದು ಲಕ್ಷ ರೂ. ನಗದು ಹಾಗೂ ಎರಡು ಪವನ್ ಚಿನ್ನದ ಆಭರಣಗಳನ್ನು ಕಳವು ಮಾಡಿ ಪರಾರಿಯಾಗಿದ್ದಾರೆ.

ಗುರುವಾರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮದುವೆ ಸೇರಿದಂತೆ ವಿವಿಧ ಕಾರ್ಯಕ್ರಮಗಳು ನಡೆದಿದ್ದರಿಂದ ಅಕ್ಕಪಕ್ಕದ ಮನೆಗಳಲ್ಲಿಯೂ ಜನರಿರಲಿಲ್ಲ. ಇದೇ ಸಂದರ್ಭವನ್ನು ಬಳಸಿಕೊಂಡ ಕಳ್ಳರು ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ. ಕೆಲಸ ಮುಗಿಸಿ ಮನೆಯವರು ವಾಪಸ್ ಬಂದಾಗ ಬಾಗಿಲು ಒಡೆದು ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ.

ಮಾಹಿತಿ ತಿಳಿದು ಘಟನಾ ಸ್ಥಳಕ್ಕೆ ಬೆರಳಚ್ಚು ತಜ್ಞರು, ಶ್ವಾನದಳ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Ads on article

Advertise in articles 1

advertising articles 2

Advertise under the article