ತಣ್ಣೀರುಬಾವಿ ಸೇತುವೆ ಕಾಮಗಾರಿ ವೇಳೆ ಉರುಳಿದ ಕ್ರೇನ್: ಇಬ್ಬರು ಕಾರ್ಮಿಕರಿಗೆ ಗಂಭೀರ ಗಾಯ
Friday, November 27, 2026
ಮಂಗಳೂರಿನ ತಣ್ಣೀರುಬಾವಿ ಸೇತುವೆ ನಿರ್ಮಾಣ ಕಾಮಗಾರಿ ವೇಳೆ ಕ್ರೇನ್ ನೀರಿಗೆ ಉರುಳಿ ಬಿದ್ದು, ಇಬ್ಬರು ಕಾರ್ಮಿಕರು ಗಾಯಗೊಂಡ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ.
ಶುಕ್ರವಾರ ಬೆಳಗ್ಗೆ ಸುಮಾರು 9.20ರ ವೇಳೆಗೆ ಈ ಘಟನೆ ನಡೆದಿದೆ. ಸೇತುವೆಯ ಸ್ಲ್ಯಾಬ್ ಅಳವಡಿಸಲು ಎರಡು ಕ್ರೇನ್‌ಗಳನ್ನು ಬಳಸಲಾಗುತ್ತಿತ್ತು. ಈ ವೇಳೆ ಒಂದು ಕ್ರೇನ್ ನೀರಿಗೆ ಉರುಳಿ ಬಿದ್ದಿದೆ. ಇದೇ ಸಂದರ್ಭದಲ್ಲಿ ಅಳವಡಿಸಲಾಗುತ್ತಿದ್ದ ಸ್ಲ್ಯಾಬ್ ಬೋಟ್ ಮೇಲೆ ಬಿದ್ದಿದೆ. ಸ್ಲ್ಯಾಬ್‌ನ ಭಾರಕ್ಕೆ ಬೋಟ್ ನೀರಿನಲ್ಲಿ ಮುಳುಗಡೆಯಾಗಿದೆ.
ಘಟನೆಯಲ್ಲಿ ಇಬ್ಬರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.