ಬೈಕ್- ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ: ಸಮಾಜ ಸೇವಕ ವಿಶು ಶೆಟ್ಟಿಗೆ ಗಂಭೀರ ಗಾಯ
Thursday, November 05, 2026
ಸಮಾಜ ಸೇವಕ ಅಂಬಲಪಾಡಿ ವಿಶು ಶೆಟ್ಟಿ ಅವರು ಚಲಾಯಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ವಿಶು ಶೆಟ್ಟಿ ಅವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅಪಘಾತದ ಪರಿಣಾಮ ವಿಶು ಶೆಟ್ಟಿ ಅವರ ಕೈ ಮತ್ತು ಕಾಲುಗಳಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅದೃಷ್ಟವಶಾತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.