-->
 ಯುವ ಪ್ರತಿಭೆಗಳಿಗೆ ತುಳುಕೂಟದಿಂದ ವೇದಿಕೆ- ಜಯಕರ ಶೆಟ್ಟಿ ಇಂದ್ರಾಳಿ

ಯುವ ಪ್ರತಿಭೆಗಳಿಗೆ ತುಳುಕೂಟದಿಂದ ವೇದಿಕೆ- ಜಯಕರ ಶೆಟ್ಟಿ ಇಂದ್ರಾಳಿ


ತುಳು ಸಂಸ್ಕೃತಿ, ಆಚಾರ-ವಿಚಾರಗಳನ್ನು ಪಸರಿಸುವುದರ ಜತೆಗೆ ಯುವ ಪ್ರತಿಭೆಗಳಿಗೆ ಸೂಕ್ತ ವೇದಿಕೆ ಕಲ್ಪಿಸುವ ಕಾರ್ಯವನ್ನು ತುಳುಕೂಟ ಉಡುಪಿ ನಿರಂತರವಾಗಿ ಮಾಡುತ್ತಿದೆ ಎಂದು ಸಂಸ್ಥೆಯ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಹೇಳಿದರು.


ತುಳುಕೂಟ ಉಡುಪಿ ವತಿಯಿಂದ ಆಯೋಜಿಸಲಾಗಿರುವ ಕೆಮ್ತೂರು ದೊಡ್ಡಣ್ಣ ಶೆಟ್ಟಿ ಸ್ಮಾರಕ ಬೆಳ್ಳಿಹಬ್ಬದ ನಾಟಕ ಪರ್ಬದ ಲಾಂಛನ ಬಿಡುಗಡೆ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ತುಳು ಭಾಷೆ, ಸಂಸ್ಕೃತಿ ಹಾಗೂ ಪರಂಪರೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ನಿಟ್ಟಿನಲ್ಲಿ ತುಳುಕೂಟ ಹಲವು ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ನಾಟಕ ಪರ್ಬದ ಮೂಲಕ ಕಲಾವಿದರಿಗೆ ಪ್ರೋತ್ಸಾಹ ನೀಡುವುದರೊಂದಿಗೆ ಯುವ ಪ್ರತಿಭೆಗಳಿಗೆ ತಮ್ಮ ಕಲೆಯನ್ನು ಪ್ರದರ್ಶಿಸಲು ಅವಕಾಶ ಕಲ್ಪಿಸಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಉದ್ಯಮಿಗಳಾದ ವಿಶ್ವನಾಥ ಶೆಣೈ, ಸುಭಾಸ್ ಸಾಲ್ಯಾನ್ ನೆಲ್ಲಿಕಟ್ಟೆ, ಹರಿಪ್ರಸಾದ್ ರೈ, ತುಳುಕೂಟದ ಉಪಾಧ್ಯಕ್ಷರಾದ ಭುವನ ಪ್ರಸಾದ್ ಹೆಗ್ಡೆ, ವಿ.ಕೆ. ಯಾದವ್, ಶೋಭಾ ಶೆಟ್ಟಿ ಹಾಗೂ ಕೆಮ್ತೂರು ಕುಟುಂಬದ ವಿಜಯಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.

ನಾಟಕ ಪರ್ಬದ ಸಂಚಾಲಕ ಪ್ರಭಾಕರ ಭಂಡಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ತುಳುಕೂಟದ ಮಾಧ್ಯಮ ಸಂಚಾಲಕಿ ಯಶೋಧ ಕೇಶವ್ ಕಾರ್ಯಕ್ರಮ ನಿರೂಪಿಸಿದರು.

Ads on article

Advertise in articles 1

advertising articles 2

Advertise under the article