ಹೆಜಮಾಡಿಯ ಹಿರಿಯ ಕಾಂಗ್ರೆಸ್ ಮುಖಂಡ ನಾರಾಯಣ ಪೂಜಾರಿ ನಿಧನ
Saturday, November 07, 2026
ಉಡುಪಿ ಜಿಲ್ಲೆಯ ಹೆಜಮಾಡಿಯ ಹಿರಿಯ ಕಾಂಗ್ರೆಸ್ ಮುಖಂಡ, ತಾಲೂಕು ಪಂಚಾಯತ್ ಮಾಜಿ ಸದಸ್ಯ ನಾರಾಯಣ ಪೂಜಾರಿ (78) ಅವರು ಇಂದು ಮುಂಜಾನೆ ನಿಧನರಾದರು.
ಮೃತರು ಪತ್ನಿ, ಓರ್ವ ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಕಾಪು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆ ಹಾಗೂ ಬಲವರ್ಧನೆಗೆ 1970ರ ದಶಕದಲ್ಲಿ ಶ್ರಮಿಸಿದ್ದ ಅವರು, ಪಕ್ಷದ ಹಿರಿಯ ಮುಖಂಡರಾಗಿ ಗುರುತಿಸಿಕೊಂಡಿದ್ದರು. ಕಾಪು ಕ್ಷೇತ್ರದ ಚಾಲಗೇಣಿ ರೈತರ ಹಕ್ಕುಗಳಿಗಾಗಿ ಹೋರಾಟ ನಡೆಸಿ, ರೈತರ ಪರವಾಗಿ ಧ್ವನಿ ಎತ್ತಿದ್ದರು. ಅಲ್ಲದೆ, ಉಡುಪಿ ತಾಲೂಕು ಭೂ ನ್ಯಾಯ ಮಂಡಳಿಯ ಸದಸ್ಯರಾಗಿಯೂ ಕಾರ್ಯನಿರ್ವಹಿಸಿದ್ದರು.
ಅವರ ನಿಧನಕ್ಕೆ ಹಲವು ಗಣ್ಯರು ಹಾಗೂ ಕಾಂಗ್ರೆಸ್ ಮುಖಂಡರು ಸಂತಾಪ ಸೂಚಿಸಿದ್ದಾರೆ.