-->
 ಸಿಡ್ನಿಯಲ್ಲಿ ಶ್ರೀ ಪುತ್ತಿಗೆ ಶ್ರೀಪಾದರಿಗೆ ಭಕ್ತಿಪೂರ್ವಕ ಗುರುವಂದನೆ

ಸಿಡ್ನಿಯಲ್ಲಿ ಶ್ರೀ ಪುತ್ತಿಗೆ ಶ್ರೀಪಾದರಿಗೆ ಭಕ್ತಿಪೂರ್ವಕ ಗುರುವಂದನೆ


ಆಸ್ಟ್ರೇಲಿಯಾದ ಸಿಡ್ನಿಗೆ ಭೇಟಿ ನೀಡಿದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರಿಗೆ ಸಿಡ್ನಿಯ ಭಕ್ತರು ಭಕ್ತಿಪೂರ್ವಕ ಸ್ವಾಗತ ಕೋರಿದರು. ಶ್ರೀ ವೆಂಕಟೇಶ್ವರ ದೇವಸ್ಥಾನದಲ್ಲಿ ಶ್ರೀಪಾದರಿಗೆ ಗುರುವಂದನೆ ಸಲ್ಲಿಸಲಾಯಿತು. ಇದೇ ಸಂದರ್ಭದಲ್ಲಿ ದೇವಸ್ಥಾನದಲ್ಲಿ ಸಂಸ್ಥಾನ ಪೂಜೆಯೂ ನೆರವೇರಿತು.


ಪೂಜೆಯ ಬಳಿಕ, ಸಿಡ್ನಿಯಲ್ಲಿ ಶ್ರೀಕೃಷ್ಣ ವೃಂದಾವನದ ನೂತನ ಮಂದಿರ ನಿರ್ಮಾಣಕ್ಕಾಗಿ ಈಗಾಗಲೇ ಖರೀದಿಸಿರುವ ಜಾಗದಲ್ಲಿ ನಿರ್ಮಾಣವಾಗಲಿರುವ ಶ್ರೀ ವೆಂಕಟಕೃಷ್ಣ ಮಂದಿರದ ನೀಲನಕ್ಷೆಯನ್ನು ಶ್ರೀಪಾದರು ವೀಕ್ಷಿಸಿದರು. ಮಂದಿರದ ನಿರ್ಮಾಣ ಯೋಜನೆಗೆ ಸಂಬಂಧಿಸಿದಂತೆ ಅಗತ್ಯ ಮಾರ್ಗದರ್ಶನ ನೀಡಿ, ಭಕ್ತರೊಂದಿಗೆ ವಿಚಾರ ವಿನಿಮಯ ನಡೆಸಿದರು.

ಸಿಡ್ನಿಯಲ್ಲಿ ಶ್ರೀಕೃಷ್ಣ ವೃಂದಾವನದ ನೂತನ ಮಂದಿರ ನಿರ್ಮಾಣವಾಗುತ್ತಿರುವುದು ಅಲ್ಲಿನ ಭಕ್ತರಲ್ಲಿ ಸಂತಸ ಮೂಡಿಸಿದೆ. 

Ads on article

Advertise in articles 1

advertising articles 2

Advertise under the article